ಬೆಂಗಳೂರು prajakiran.com : ರಾಜ್ಯದ ರಾಜಧಾನಿಯ ಜನ ಮೊದಲೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎಂದು ಕಂಗಾಲಾಗಿ ಚಿಂತಾಕ್ರಾಂತರಾಗಿದ್ದಾರೆ.
ಅಂತಹ ಸಂಕಷ್ಟದ ಸಮಯದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೋಡಿ ಜನ ಜಂಗುಳಿ ಸೇರಿದೆ ಎಂದು ಸುಳ್ಳು ವೀಡಿಯೋ ಹರಿಬಿಟ್ಟ ಭೂಪನನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ. ಭಾಸ್ಕರ್ ರಾವ್, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಇಂತಹ ಸುಳ್ಳು ಸುದ್ದಿಗೆ ಜನತೆ ಮಹತ್ವ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ಅಲ್ಲದೆ,ಬಂಧಿತನನ್ನು ಸಮೀರವುಲ್ಲಾ ಎಂದು ಗುರುತಿಸಲಾಗಿದ್ದು, ಈತ ತನ್ನ ಫೇಸಬುಕ್ ನಲ್ಲಿ ವೀಡಿಯೋ ಹಾಕಿದ್ದ. ಇದು ವೈರಲ್ ಆಗಿತ್ತು.
ಈವೀಡಿಯೋ ನಕಲಿ ಎಂಬುದು ಗೊತ್ತಾಗಿ ಬೆಂಗಳೂರು ಸಿಸಿಬಿ ಪೊಲೀಸರು ಆತನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಇದು ರಾಜ್ಯದ ವಿವಿಧ ಆಸ್ಪತ್ರೆಗಳ ಹೆಸರಿನಲ್ಲಿ ಹುಬ್ಬಳ್ಳಿ-ಧಾರವಾಡದ ಕಿಮ್ಸ್ ಆಸ್ಪತ್ರೆ ಸೇರಿದಂತೆ ಹೀಗೆ ವಿವಿಧ ಆಸ್ಪತ್ರೆಗಳ ಹೆಸರಿನಲ್ಲಿ ವೈರಲ್ ಆಗಿರುವುದು ಇಲ್ಲಿ ಸ್ಮರಿಸಬಹುದು.