ರಾಜ್ಯ

ವೀರಶೈವ-ಲಿಂಗಾಯತ ಸಮಾಜದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ

ಧಾರವಾಡ prajakiran.com : ವೀರಶೈವ-ಲಿಂಗಾಯತ ಸಮಾಜದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈಡೇರಿಸಲು ಸರಕಾರ ಮುಂದಾಗಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ವೀರಶೈವ-ಲಿಂಗಾಯತ ಸಮಾಜದ ಮುಖಂಡರು ಎಚ್ಚರಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ವೀರಶೈವ-ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ (ಓಬಿಸಿ) ಪಟ್ಟಿಗೆ ಸೇರಿಸಬೇಕು ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸಾಂಕೇತಿಕ ಧರಣಿಯಲ್ಲಿ ಸರಕಾರದ ಗಮನ ಸೆಳೆಯಲಾಯಿತು.

ಮಾಜಿ ಸಭಾಪತಿ ವೀರಣ್ಣ ಮತ್ತೀಕಟ್ಟಿ ಮಾತನಾಡಿ, ಮಹಾಸಭಾದ ಪದಾಧಿಕಾರಿಗಳನ್ನೊಳಗೊಂಡ ನಿಯೋಗವು ಇನ್ನೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಾಜದ ಬೇಡಿಕೆಗಳನ್ನು ಈಡೇರಿಸುವ ಕುರಿತು ಮನವರಿಕೆ ಮಾಡಿಕೊಡಲಾಗುವುದು. ಜೊತೆಗೆ ಸಮಾಜದ ಶಾಸಕರು ಮತ್ತು ಸಚಿವರು ಮೇಲೆಯೂ ಒತ್ತಡ ತರುವ ಕೆಲಸ ಮಾಡಲಾಗುವುದು ಎಂದರು.

ಹಿರಿಯ ನ್ಯಾಯವಾದಿ ಬಿ.ಡಿ.ಹಿರೇಮಠ ಮಾತನಾಡಿ, ಸಂವಿಧಾನದಲ್ಲಿ ಸಮಾನತೆಗೆ ಪ್ರಾಮುಖ್ಯತೆ ಕೊಡಲಾಗಿದೆ. ಆದರೆ, ವೀರಶೈವ-ಲಿಂಗಾಯತ ಸಮಾಜವು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಸಾಕಷ್ಟು ಕಷ್ಟಗಳನ್ನು ಕಂಡಿದೆ.  ನಿಟ್ಟಿನಲ್ಲಿ ಸಮುದಾಯದ ಹಿತದೃಷ್ಟಿಯಿಂದ ಸರಕಾರ ಆದ್ಯತೆ ಮೇರೆಗೆ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲದಿದ್ದರೆ ಹೋರಾಟಕ್ಕಿಳಿದು ಪಡೆಯಬೇಕಾಗುತ್ತದೆ ಎಂಬುದನ್ನು ಆಡಳಿತಗಾರರು ಅರಿಯಬೇಕು ಎಂದರು.

ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ವೀರಶೈವ-ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವುದು ಹಾಗೂ ಸಮಾಜದ ಕಲ್ಯಾಣಕ್ಕಾಗಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಸಲುವಾಗಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಮತ್ತು ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಅವರ ನೇತೃತ್ವದಲ್ಲಿ ಈಗಾಗಲೇ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಸರಕಾರ ಗಮನಹರಿಸುತ್ತಿಲ್ಲ. ಕಾರಣದಿಂದ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕಾ ಘಟಕಗಳಿಂದ ಧರಣಿ ನಡೆಸುವ ಮೂಲಕ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ ಎಂದರು.

ನಂತರ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.  

ಉಪ್ಪಿನ ಬೆಟಗೇರಿಯ ಶ್ರೀ ಕುಮಾರ ವಿರುಪಾಕ್ಷ ಮಹಾಸ್ವಾಮೀಜಿ, ಮಾಜಿ ಸಚಿವ ಪಿ.ಸಿ.ಸಿದ್ಧನಗೌಡರ ಸೇರಿದಂತೆ ಸಮಾಜದ ಬಾಂಧವರು ಧರಣಿಯಲ್ಲಿ ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *