ರಾಜ್ಯ

ಸೆ.೨೪ ರಂದು ವೀರಶೈವ ಮಹಾಸಭಾದಿಂದ ಸಾಂಕೇತಿಕ ಧರಣಿ

ಧಾರವಾಡ prajakiran.com : ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದವತಿಯಿಂದ ವೀರಶೈವ-ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ (ಓಬಿಸಿ) ಪಟ್ಟಿಗೆ ಸೇರಿಸಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಹಾಗೂ ರಾಜ್ಯದಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹಿಸಿ ಸೆ.೨೪ ರಂದು ಬೆಳಗ್ಗೆ ೧೦.೩೦ ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ ತಿಳಿಸಿದರು.

ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಹೊರಡಿಸಿರುವ ಇತರ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನೂ  ಕೈ ಬಿಟ್ಟಿರುವುದರಿಂದ ಹಿಂದುಳಿದಿರುವ ಸಮುದಾಯದ ಯುವ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಂಚಿತರಾಗಿದ್ದಾರೆ.

ಸಂವಿಧಾನದ ಅನುಚ್ಛೇದ ೧೫(೪) ಮತ್ತು ೧೬(೪)ರನ್ವಯ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಕರ್ನಾಟಕದ ಇತರ ಹಿಂದುಳಿದವರ ಪಟ್ಟಿಯಲ್ಲಿರುವ ಎಲ್ಲ ಸಮುದಾಯಗಳನ್ನೂ ಸೇರ್ಪಡೆ ಮಾಡಬೇಕಾಗುತ್ತದೆ. ಆದರೆ, ಕೇಂದ್ರದ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದರು.

ಕಳೆದ ೭೦ ವರ್ಷಗಳಿಂದಲೂ ವೀರಶೈವ ಲಿಂಗಾಯತ ಸಮುದಾಯವನ್ನು ಇತರ ಹಿಂದುಳಿದ ವರ್ಗ ಎಂದು ಪರಿಗಣಿಸಲಾಗಿದ್ದರೂ, ಕೇಂದ್ರ ಪಟ್ಟಿಯಲ್ಲಿ ಈ ಸಮುದಾಯವನ್ನು ಕೈಬಿಟ್ಟಿರುವುದು ಘೋರ ಅನ್ಯಾಯವಾಗಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಒಂದೂವರೆ ಕೋಟಿಗೂ ಹೆಚ್ಚು ವೀರಶೈವ – ಲಿಂಗಾಯತ ಸಮಾಜದವರಿದ್ದಾರೆ. ಇದರಲ್ಲಿ ೮೬ ಉಪಪಂಗಡಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದಾರೆ. ಸಾಕಷ್ಟು ಬಡವರಿದ್ದಾರೆ. ಅವರಿಗೆ ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.

ಸಮುದಾಯದ ಹಿತದೃಷ್ಠಿಯಿಂದ ರಾಜ್ಯದಲ್ಲಿ ವೀರಶೈವ ಲಿಂಗಾಯತಅಭಿವೃದ್ದಿ ನಿಗಮ ಸ್ಥಾಪಿಸಿ ಆರಂಭಿಕ ಹಂತದಲ್ಲಿ ೧ ಸಾವಿರ ಕೋಟಿ ರೂಪಾಯಿ ಒದಗಿಸಬೇಕು.

ಈ ದಿಸೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಸಮುದಾಯದ ಶಾಸಕರು ಆದ್ಯತೆ ಮೇರೆ ಕಾರ್ಯೋನ್ಮುಖರಾಗಬೇಕಿದೆ. ಸದನದಲ್ಲಿಯೂ ನಮ್ಮ ಸಮುದಾಯದ ಶಾಸಕರು ಸರಕಾರದ ಮೇಲೆ ಒತ್ತಡ ತರಬೇಕು ಎಂದು ಹುಣಸಿಮರದ ಹೇಳಿದರು.

ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಮ್ಮಿಕೊಂಡಿರುವ ಧರಣಿಯಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧರಣಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಮಹಾಸಭಾ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಕೋಶಾಧ್ಯಕ್ಷ ಬಿ.ಎಸ್.ಗೋಲಪ್ಪನವರ, ಕಾರ್ಯದರ್ಶಿ ಸಿದ್ದಣ್ಣ ಕಂಬಾರ, ಶಹರ ಘಟಕದ ಅಧ್ಯಕ್ಷ ಎಂ.ಎಫ್.ಹಿರೇಮಠ, ಯುವ ಘಟಕದ ಜಿಲ್ಲಾ ಅಧ್ಯಕ್ಷ ಮೈಲಾರ ಉಪ್ಪಿನ ಸುದ್ದಿಗೋಷ್ಟಿಯಲ್ಲಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *