ವಿಜಯಪುರ prajakiran.com : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯ ಎ ಎಸ್ ಐ ಒಬ್ಬರಿಗೆ ಕರೋನಾ ಬಂದ ಹಿನ್ನಲೆಯಲ್ಲಿ ಎಸ್ಪಿ ಕಚೇರಿಯನ್ನೇ ಸೀಲ್ ಡೌನ್ ಮಾಡಲಾಗಿದೆ.
ಅದೇರೀತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಕಾನ್ಸಟೇಬಲ್ ಒಬ್ಬರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಕಳೆದ ಹಲವು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಕರೋನಾ ರಣಕೇಕೆ ಹಾಕುತ್ತಿದ್ದು, ಕೊರೊನಾ ವಾರಿಯರ್ಸ್ ಆಗಿರುವ ಪೊಲಿಸ್ ಇಲಾಖೆಗೂ ಇದೀಗ ಕೊರೊನಾ ಭಯ ಶುರುವಾಗಿದೆ.
ಈಗಾಗಲೇ ಎಸ್ಪಿ ಕಚೇರಿ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸೋಂಕಿತ ಎ ಎಸ್ ಐ ಹಾಗೂ ಕಾನ್ಸಟೇಬಲ್ ನನ್ನು ನೇರವಾಗಿ ಸಂಪರ್ಕಿಸಿದವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಆರೋಗ್ಯ ಇಲಾಖೆ ಪತ್ತೆ ಮಾಡುತ್ತಿದೆ.
ಕೆಲವು ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆಗೆ ರವಾನಿಸಲಾಗಿದ್ದು, ಕೆಲವರನ್ನೂ ಹೋಮ್ ಕ್ವಾರಂಟಿನ್ ಗೆ ಸೂಚಿಸಿದೆ ಎಂದು ತಿಳಿದುಬಂದಿದೆ