ಅಂತಾರಾಷ್ಟ್ರೀಯ

ಚಂದ್ರಯಾನ 3 ಯಶಸ್ಸಿ : ದೇಶದ್ಯಾಂತ ಸಡಗರ, ಸಂಭ್ರಮ

*ಚಂದ್ರಯಾನ 3 ಯಶಸ್ಸಿ*

*ದೇಶದ್ಯಾಂತ ಸಡಗರ ಸಂಭ್ರಮ*

*ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂಧಿಸಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಆ 23 :
ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿತ್ತು. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ.

ಬಾಹ್ಯಾಕಾಶ ವಿಜ್ಞಾನಕ್ಕೆ ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ.

ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಪೂರ್ವವಾದ ಸಾಧನೆ ಮಾಡಿದೆ.

ಭಾರತೀಯರೆಲ್ಲರಿಗೂ ಇದು ಹೆಮ್ಮೆಯ ಕ್ಷಣ. ಈ ಅಸಾಧಾರಣ ಸಾಧನೆ ಮಾಡಿದ ಪ್ರತಿಯೊಬ್ಬ ವಿಜ್ಞಾನಿಗಳಿಗೂ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಜಗತ್ತಿನ ಮುಂಚೂಣಿ ದೇಶಗಳ ಸಾಲಿನಲ್ಲಿ ಮತ್ತೊಮ್ಮೆ ನಿಚ್ಚಳವಾಗಿ ಪ್ರಕಾಶಿಸಿದೆ.

ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಾಗೂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *