ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಏಪ್ರಿಲ್ 21ಕ್ಕೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿ ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಲಾಯಿತು 

ಸೋಮವಾರ ಹೈಕೋರ್ಟ್ ನ್ಯಾರ್ಯಮೂರ್ತಿ ಕೆ. ನಟರಾಜನ್ ಅವರ ಎದುರು ಅರ್ಜಿ ವಿಚಾರಣೆಗೆ ಬಂದಿತು.
ಆದರೆ ಸಮಯಾವಕಾಶ ಕೊರತೆ ಹಿನ್ನೆಲೆಯಲ್ಲಿ ಬುಧವಾರ ಕ್ಕೆ ಮುಂದೂಡಿದರು.
ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪರ ವಕೀಲ ಶಶಿಕಿರಣ ಶೆಟ್ಟಿ ವಾದ ಮಂಡಿಸಿದ್ದಾರೆ.

ಇದಕ್ಕೆ ಸಿಬಿಐ ಪರ ವಕೀಲರು ಪ್ರತಿವಾದ ಮಂಡಿಸಲಿದ್ದು, ಅವರಿಗೆ ಸುದೀರ್ಘವಾದ ವಾದ ಮಂಡಿಸಲು ಹೆಚ್ವಿನ ಸಮಯ ಬೇಕಾಗಿರುವುದರಿಂದ ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿದರು.

ಈ ಹಿನ್ನಲೆಯಲ್ಲಿ ಮುಂದಿನ ವಿಚಾರಣೆಯನ್ನು ಎಪ್ರಿಲ್ 21ಕ್ಕೆ ಮುಂದೂಡಲಾಯಿತು.

ಈ ಹಿಂದೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.

ಇದೀಗ ಸಿಬಿಐ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಮತ್ತೆ ಅವರ ಎದುರು ಜಾಮೀನು ಅರ್ಜಿ ವಿಚಾರಣೆಗೆ ಬಂದಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸಿಬಿಐ ಅಧಿಕಾರಿಗಳ ಪರ ವಕೀಲ ಎಸ್.ವಿ. ರಾಜು ಅವರು
ಮಾಜಿ ಸಚಿವರ ಪರ ವಕೀಲರ ವಾದಕ್ಕೆ ಏನೆಲ್ಲಾ ತಕರಾರು ಹಾಗೂ ಪ್ರತಿ ವಾದ ಮಂಡಿಸಲಿದ್ದಾರೆ ಎಂಬುದರ ಮೇಲೆ ಅವರಿಗೆ ಜಾಮೀನು ನೀಡಬೇಕಾ ಬೇಡವಾ ಎಂಬುದನ್ನು ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರು ನಿರ್ಧರಿಸಲಿದ್ದಾರೆ.

ಈಗಾಗಲೇ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್ ಮತ್ತು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *