ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಾಕ್ಷ್ಯನಾಶ ಪ್ರಕರಣದಲ್ಲೂ ಜಾಮೀನು

ಬೆಂಗಳೂರು prajakiran.com : ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಾಕ್ಷ್ಯನಾಶ ಪ್ರಕರಣದಲ್ಲೂ ಜಾಮೀನು ದೊರಕಿದೆ.

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ವಿನಯ ಕುಲಕರ್ಣಿ ಗೆ ಸುಪ್ರೀಂಕೋರ್ಟ್ ಇತ್ತೀಚೆಗೆ ಕೊಲೆಗೆ ಸಂಚು ಪ್ರಕರಣದಲ್ಲಿ ಕೂಡ ಷರತ್ತು ಬದ್ದ ಜಾಮೀನು ನೀಡಿತ್ತು.

ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯ ದಲ್ಲಿ ಸಾಕ್ಷ್ಯ ಬಾಶ ಪ್ರಕರಣದಲ್ಲಿ ಜಾಮೀನು ನೀಡುವಂತೆ ವಾದ ಮಂಡಿಸಿದ್ದರು.

ವಾದ ಪ್ರತಿ ವಾದ ಆಲಿಸಿದ ನ್ಯಾಯಾಲಯ ಜಾಮೀನು ಜೂರು ಮಾಡಿದೆ.

ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಕಳೆದ ವರ್ಷ ನವೆಂಬರ್ 5 ರಂದು ಬಂಧನ ಮಾಡಿತ್ತು.

ಸಿಬಿಐ ವಿನಯ ಕುಲಕರ್ಣಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರಿಸಿತ್ತು.
ಬರೋಬ್ಬರಿ ಒಂಬತ್ತು ತಿಂಗಳ ನಂತರ ವಿನಯ ಕುಲಕರ್ಣಿಗೆ ಬಿಡುಗಡೆ ಭಾಗ್ಯ ದೊರೆತಿದ್ದು, ಅವರ ಅಭಿಮಾನಿಗಳಿಗೆ, ಸಂತಸ ಇಮ್ಮಡಿಗೊಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *