ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ
ನವದೆಹಲಿ prajakiran.com : ಧಾರವಾಡ ಜಿಲ್ಲೆಯ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.
ಇದರಲ್ಲಿ ಮೊದಲ ಪ್ರತಿವಾದಿಯಾಗಿ
ಕರ್ನಾಟಕ ಸರ್ಕಾರ ಹಾಗೂ ಎರಡನೇಯವರಾಗಿ ಸಿಬಿಐ ವಿರುದ್ದ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಈ ಅರ್ಜಿ ಮೇ 28ರಂದೇ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ. ಅದು ಮುಂದಿನ 90 ದಿನಗಳಲ್ಲಿ ವಿಚಾರಣೆಗೆ ಬರಲಿದ್ದು, ಇದು ತೀವ್ರ ಕುತೂಹಲ ಕೆರಳಿಸಿದೆ.
ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಧಾರವಾಡದ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ, ಧಾರವಾಡ ಹೈಕೋರ್ಟ್, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಬೆಂಗಳೂರಿನ ಹೈಕೋರ್ಟ್ ತಿರಸ್ಕರಿಸಿತ್ತು.
ಇದೀಗ ಕೊನೆಯ ಅಸ್ತ್ರವಾಗಿ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ವಾದ-ಪ್ರತಿವಾದ ಆಲಿಸಿದ ಬಳಿಕ ತನ್ನ ನಿರ್ಧಾರ ಪ್ರಕಟಿಸಲಿದೆ. ಅಲ್ಲಿಯವರೆಗೆ ಕಾದು ನೋಡಬೇಕು.