ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ. 18ಕ್ಕೆ

ಧಾರವಾಡ prajakiran.com : ಧಾರವಾಡದ ಹೆಬ್ಬಳ್ಳಿ ಬಿಜೆಪಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನ.18ಕ್ಕೆ ಮುಂದೂಡಿಕೆಯಾಗಿದೆ.

ಗುರುವಾರ ಧಾರವಾಡದ ಮೂರನೇ ಹೆಚ್ಚುವರಿ ವಿಶೇಷ ಹಾಗೂ ಸಿಬಿಐ ನ್ಯಾಯಾಲಯದ ನ್ಯಾಯಾಧೀಶೆಯರಾದ ಶ್ರೀಮತಿ ಎಂ. ಪಂಚಾಕ್ಷರಿ ಅವರು ಈ ಆದೇಶ ಹೊರಡಿಸಿದರು.

ವಿನಯ ಕುಲಕರ್ಣಿ ಅವರ ಪರ ವಿಚಾರಣೆಗೆ ಹಾಜರಾದ ಬೆಂಗಳೂರಿನ ವಕೀಲ ಭರತಕು‌ಮಾರ ಅವರು ತಮ್ಮ ಕಕ್ಷಿದಾರರಿಗೆ
ಜಾಮೀನು ನೀಡುವಂತೆ ಕೋರಿದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಿಬಿಐ ಪರ ವಿಶೇಷ ಅಭಿಯೋಕರಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿದರು.

ಹೀಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನಿಗೆ ಸಿಬಿಐ ಯಾವೆಲ್ಲಾ
ತಕರಾರು ಸಲ್ಲಿಸಲಿದೆ ಎಂಬುದರ ಆಧಾರದ ಮೇಲೆ ವಾದ-ಪ್ರತಿವಾದ ನಡೆಯಲಿದೆ.

ಆನಂತರ ಅವರಿಗೆ ಜಾಮೀನು ನೀಡಬೇಕೆ, ಬೇಡವೇ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ.

ವಿನಯ ಕುಲಕರ್ಣಿ ಅವರನ್ನು ಸಿಬಿಐ ಈಗಾಗಲೇ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಅವರನ್ನು ನ.5ರಂದು ಸಿಬಿಐ ತನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ, ಆನಂತರ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆ ನಡೆಸಲು
ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *