ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ, ಸೋದರ ಮಾವ ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನ ವಿಸ್ತರಣೆ

ಧಾರವಾಡ Prajakiran.com :  ಧಾರವಾಡ ಜಿಲ್ಲಾ ಪಂಚಾಯತ  ಬಿಜೆಪಿ ಸದಸ್ಯ ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಸಿಬಿಐ ನಿಂದ ಬಂಧನಕ್ಕೊಳ್ಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿ ಮತ್ತೆ ಹದಿನಾಲ್ಕು ದಿನಗಳ ಕಾಲ ವಿಸ್ತರಣೆಗೊಂಡಿದೆ.

ಫೆಬ್ರುವರಿ 4  ರವರೆಗೆ ವಿಸ್ತರಣೆ ಮಾಡಿ ಧಾರವಾಡ ಸಿಬಿಐ ವಿಶೇಷ ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ. 

ಶುಕ್ರವಾರ ಪ್ರಕರಣದಲ್ಲಿ ಬಂಧಿತವಾಗಿರುವ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ ಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಅವರಿಗೆ ಮನವಿ ಮಾಡಿಕೊಂಡರು.

ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ಬಳಿಕ ನ್ಯಾಯಾಧೀಶರು ಈ ಮಹತ್ವದ ಆದೇಶ ಹೊರಡಿಸಿದರು.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ‌‌ ವಿನಯ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದರೆ, ಇತ್ತ ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ಧಾರವಾಡ ಕೇಂದ್ರ ಕಾರಾಗೃಹದಲ್ಲಿಯೇ ಫೆ. 4  ರ ವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ನಿನ್ನೆಯಷ್ಟೆ ಧಾರವಾಡ ಹೈಕೋರ್ಟ್ ಎಕಸದಸ್ಯ ಪೀಠದ ನ್ಯಾಯಮೂರ್ತಿ ಕೆ.ಎನ್. ನಟರಾಜ್ ಅವರು  ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *