ರಾಜ್ಯ

ಡಿಸೆಂಬರ್ 8 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತೆಗೆದು ಹಾಕಲು ಅವಕಾಶ

ಧಾರವಾಡ ಪ್ರಜಾಕಿರಣ. ಕಾಮ್ ನ.09: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಆರಂಭವಾಗಿದೆ. ಡಿಸೆಂಬರ್ 8 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಹಕ್ಕು ಮತ್ತು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ತಕರಾರು ಸಲ್ಲಿಸಲು ಅವಕಾಶವಿದೆ.

ಈ ಅವಧಿಯಲ್ಲಿ ಮತದಾರರ ನೋಂದಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಹಕ್ಕು ಮತ್ತು ತಕರಾರು ಸಲ್ಲಿಸಲು ಅನುವಾಗುವಂತೆ ವಿಶೇಷ ಕ್ಯಾಂಪ್‍ಗಳನ್ನು ಡಿಸೆಂಬರ್ 03, ಮತ್ತು 04, 2022 ರಂದು ಆಯೋಜಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸ್ವೀಕೃತಗೊಂಡ ಹಕ್ಕು ಮತ್ತು ತಕರಾರುಗಳನ್ನು ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿಗಳು ಡಿಸೆಂಬರ್ 26, 2022ರ ಒಳಗಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಜನವರಿ 05, 2023 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ನವೆಂಬರ್ 09, 2022 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಂತೆ ಮತದಾರರ ವಿವರ :
ನವಲಗುಂದ-69 : 234 ಮತಗಟ್ಟೆಗಳು, ಪುರುಷ-103127, ಮಹಿಳೆ-100595, ಇತರೆ-5, ಒಟ್ಟು-203727 ಮತದಾರರಿದ್ದಾರೆ.

ಕುಂದಗೋಳ-70 : 214 ಮತಗಟ್ಟೆಗಳು, ಪುರುಷ-92298, ಮಹಿಳೆ-86587, ಇತರೆ-4, ಒಟ್ಟು-178889 ಮತದಾರರಿದ್ದಾರೆ.

ಧಾರವಾಡ-71 : 230 ಮತಗಟ್ಟೆಗಳು, ಪುರುಷ-102535, ಮಹಿಳೆ-100889 ಇತರೆ-9, ಒಟ್ಟು-203433 ಮತದಾರರಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೂರ್ವ-72: 211 ಮತಗಟ್ಟೆಗಳು, ಪುರುಷ-100736, ಮಹಿಳೆ-100846, ಇತರೆ-13, ಒಟ್ಟು-201595 ಮತದಾರರಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್-73 : 254 ಮತಗಟ್ಟೆಗಳು, ಪುರುಷ-120439, ಮಹಿಳೆ-121908, ಇತರೆ-37, ಒಟ್ಟು-242384 ಮತದಾರರಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಶ್ಚಿಮ-74: 266 ಮತಗಟ್ಟೆಗಳು, ಪುರುಷ-126111, ಮಹಿಳೆ-128600, ಒಟ್ಟು-254711 ಮತದಾರರಿದ್ದಾರೆ.

ಕಲಘಟಗಿ-75 : 227 ಮತಗಟ್ಟೆಗಳು, ಪುರುಷ-96763, ಮಹಿಳೆ-90407, ಇತರೆ-7, ಒಟ್ಟು-187177 ಮತದಾರರಿದ್ದಾರೆ.

ಒಟ್ಟು 1636 ಮತಗಟೆಗಳು, ಪುರುಷ ಮತದಾರರು-742009, ಮಹಿಳಾ ಮತದಾರರು-729832, ಇತರೆ ಮತದಾರರ-75 ಸೇರಿ ಒಟ್ಟು 1471916 ಮತದಾರರಿದ್ದಾರೆ.

ಚುನಾವಣಾ ಸುಧಾರಣೆಗಳು ಮತ್ತು ಅದರ ಪ್ರಮುಖ ಮುಖ್ಯಾಂಶಗಳು : ಮತದಾರರ ಪಟ್ಟಿಯ ಭಾಗವಾಗಲು ಯುವ ಸಮುದಾಯಕ್ಕೆ ಹೆಚ್ಚಿನ ಅವಕಾಶಗಳು, ಮತದಾರರ ಪಟ್ಟಿಗೆ ನೋಂದಾಯಿಸಲು ವರ್ಷದಲ್ಲಿ ನಾಲ್ಕು ಅವಕಾಶಗಳು ಮೊದಲಿದ್ದಂತೆ ಅರ್ಹತಾ ದಿನಾಂಕವಾದ ಜನವರಿ 01 ರವರೆಗೂ ಕಾಯಬೇಕಾಗಿಲ್ಲ.

17 ತುಂಬಿದ ವಯಸ್ಸಿನ ಯುವಕ, ಯುವತಿಯರಿಗೆ ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ಆಗಸ್ಟ್ 01, 2022 ರಿಂದ ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ 8 ಲಭ್ಯವಿದೆ. ಮತದಾರರ ಪಟ್ಟಿಗೆ ಸ್ವಯಂಪ್ರೇರಿತ ಆಧಾರ್ ಜೋಡಣೆ ಸೌಲಭ್ಯ ಒಂದೇ ತರಹದ ಹೆಸರ, ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ ಆರೋಗ್ಯಕರ ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿನ ಈ ಎಲ್ಲ ತಿದ್ದುಪಡಿಗಳು ಆಗಸ್ಟ್ 01, 2022 ರಿಂದ ಜಾರಿಗೆ ಬಂದಿವೆ.

ಜನತಾ ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 14(ಬಿ) ಮತ್ತು ಮತದಾರರ ನೋಂದಣಿ ನಿಯಮಗಳು, 1960 ರಲ್ಲಿ ಸೂಕ್ತ ತಿದ್ದುಪಡಿ ಮಾಡಲಾಗಿದೆ. ಅದರಂತೆ ಪ್ರಸ್ತುತ ಜಾರಿಯಲ್ಲಿರುವ ಜನವರಿ,01 ರ ಅರ್ಹತಾ ದಿನಾಂಕದಿಂದ ಜೊತೆಗೆ 1 ನೇ ಎಪ್ರೀಲ್, 01ನೇ ಜುಲೈ ಮತ್ತು 1ನೇ ಅಕ್ಟೋಬರ್ ರಂದು ಹೆಸರು ಸೇರ್ಪಡೆಗೆ ಅವಕಾಶ ಕಲಿಸಲಾಗಿದೆ. ಇನ್ನು ಮುಂದೆ ಮತದಾರರ ಪಟ್ಟಿಯನ್ನು ಪ್ರತಿ ತ್ರೈಮಾಸಿಕದಲ್ಲಿ ಕಾಲೋಚಿತಗೊಳಿಸಲಾಗುವುದು.

ಇದರಿಂದ ಆ ತ್ರೈಮಾಸಿಕದಲ್ಲಿ 18 ವರ್ಷ ತುಂಬುವ ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆ ಮತದಾರರ ಭಾವಚಿತ್ರದ ಗುರುತಿನ ಚೀಟಿಯನ್ನು ಸಹ ವಿತರಿಸಲಾಗುವುದು.

ನಮೂನೆ-6 ಬಿ: ಮತದಾರರ ಪಟ್ಟಿಯಲ್ಲಿನ ಮತದಾರರನ್ನು ದೃಢೀಕರಣದ ಉದ್ದೇಶದಿಂದ ಹೊಸದಾಗಿ ನಮೂನೆ-6ಬಿ ಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ದೃಢೀಕರಿಸಲು ಅವಕಾಶ ನೀಡಲಾಗಿದೆ. ಇದು ಮತದಾರರಿಗೆ ಸ್ವಯಂಪ್ರೇರಿತ ಆವಕಾಶವಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಶೇಕಡಾ 71.42 ರಷ್ಟು ಮತದಾರರು ತಮ್ಮ ಆಧಾರ ನಂಬರ್‍ಗಳನ್ನು ಜೋಡಣೆ ಮಾಡಿಕೊಂಡಿರುತ್ತಾರೆ.

ಇದರಲ್ಲಿ ಗ್ರಾಮೀಣ ಜನರು ಹೆಚ್ಚಿನ ಪ್ರಮಾಣದಲ್ಲಿ ಆಧಾರ ಜೋಡಣೆ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ನಗರದ ಮತದಾರರು ಕಡಿಮೆ ಜೋಡಣೆ ಮಾಡಿದ್ದು, ಹೆಚ್ಚಿನ ಆಸಕ್ತಿ ವಹಿಸಿ ಸ್ವಯಂಪ್ರೇರಿತವಾಗಿ ವೋಟರ್ ಹೆಲ್ಪ್‍ಲೈನ್ ಆ್ಯಪ್ ಮೂಲಕ ಜೋಡಣೆ ಮಾಡಲು ಕೋರಲಾಗಿದೆ.

ಅಕಸ್ಮಾತ್ ಆಧಾರ್ ಮಾಹಿತಿ ಒದಗಿಸಲು ಸಾಧ್ಯವಾಗದಿದ್ದಲ್ಲಿ, ಆಧಾರ ಜೋಡಣೆ ಮಾಡಿಕೊಳ್ಳದೇ ಇರುವ ಮತದಾರರು ಕೇಂದ್ರ ಚುನಾವಣಾ ಆಯೋಗವು ತಿಳಿಸಿರುವ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಒದಗಿಸಿ ತಮ್ಮ ಆಧಾರ ನಂಬರಗಳನ್ನು ಜೋಡಣೆ ಮಾಡಿಕೊಳ್ಳುವಂತೆ ಕೋರಲಾಗಿದೆ.

ಆಧಾರ್ ಬದಲಿಗೆ ಮತದಾರನ ಮಾಹಿತಿ ಇರುವ ಮನ್ರೇಗಾ ಉದ್ಯೋಗ ಕಾರ್ಡ್, ಬ್ಯಾಂಕ್, ಅಂಚೆ ಕಛೇರಿಯಿಂದ ನೀಡಲಾದ ಭಾವಚಿತ್ರವಿರುವ ಪಾಸ್ ಪುಸ್ತಕಗಳು, ಕಾರ್ಮಿಕ ಮಂತ್ರಾಲಯದ ಯೋಜನೆಯಡಿಯಲ್ಲಿ ನೀಡಲಾದ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ಮೂಲಕ ನೀಡಲಾದ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್‍ಪೆÇೀರ್ಟ್ ಭಾವಚಿತ್ರವಿರುವ ಪಿಂಚಣಿ, ಕೇಂದ್ರ, ರಾಜ್ಯ ಸರ್ಕಾರ, ಸಾರ್ವಜನಿಕ ವಲಯದ ಉದ್ದಿಮೆಗಳು, ಸಾರ್ವಜನಿಕ ನಿಯಮಿತ ಕಂಪನಿಗಳಿಂದ ಉದ್ಯೋಗಿಗಳಿಗೆ ನೀಡಲಾದ ಭಾವಿಚಿತ್ರವಿರುವ ಸೇವಾ ಗುರುತಿನ ಚೀಟಿ, ಸಂಸತ್ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿ. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಮೂಲಕ ನೀಡಲಾದ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ). ನಮೂನೆ-6ಬಿಯಲ್ಲಿ ಮಾಹಿತಿ ದೃಢೀಕರಿಸಲು ದಾಖಲೆಗಳನ್ನು ನೀಡಬಹುದಾಗಿದೆ.

ಭಾರತ ಚುನಾವಣಾ ಆಯೋಗವು ನೀಡಿರುವ ನಿರ್ದೇಶನಗಳನ್ನು ಪಾಲಿಸಿಕೊಂಡು ಪ್ರತಿ ಮತದಾರ ತನ್ನ ಮತದಾರ ಚೀಟಿಗೆ ಆಧಾರ್ ಜೋಡಣೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *