ರಾಜ್ಯ

ವಾರಾಂತ್ಯದ ಕರ್ಪ್ಯೂ ಮಾರ್ಗಸೂಚಿ : ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಅತ್ಯಾವಶ್ಯಕ, ತುರ್ತು ಕಾರ್ಯ ಹೊರತುಪಡಿಸಿ ಜನರ ಓಡಾಟ ಕಟ್ಟುನಿಟ್ಟಾಗಿ ನಿಷೇಧ

ಧಾರವಾಡ prajakiran. com ಜ.06: ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಅವರು,
1. ತುರ್ತು, ಅತ್ಯಾವಶ್ಯಕ ಸೇವೆಗಳು ಮತ್ತು ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಮುಂತಾದವುಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸತಕ್ಕದ್ದು ಮತ್ತು ಅವುಗಳ ಅಧಿಕಾರಿ, ಸಿಬ್ಬಂದಿಗೆ ಅನಿಬರ್ಂಧಿತ ಓಡಾಟಕ್ಕೆ ಅವಕಾಶ ನೀಡತಕ್ಕದ್ದು.

2. ಎಲ್ಲಾ ಸಾರ್ವಜನಿಕ ಉದ್ಯಾನಗಳು ಮುಚ್ಚಿರತಕ್ಕದ್ದು.

3. ಮಾಹಿತಿ ತಂತ್ರಜ್ಞಾನ ಉದ್ದಿಮೆಗಳು ಒಳಗೊಂಡಂತೆ ಎಲ್ಲಾ ಉದ್ದಿಮೆಗಳ ಕಾರ್ಯಾಚರಣೆಗೆ ಕಫ್ರ್ಯೂನಿಂದ ವಿನಾಯತಿ ನೀಡಿದೆ. ನೌಕರರು ಆಯಾ ಸಂಘ, ಸಂಸ್ಥೆಗಳು ನೀಡುವ ಅಧಿಕೃತ ಗುರುತಿನ ಚೀಟಿಯನ್ನು ಹಾಜರುಪಡಿಸುವ ಮೂಲಕ ಸಂಚರಿಸಲು ಅನುಮತಿಸುವುದು.

4. ತುರ್ತು ಚಿಕಿತ್ಸೆಗಾಗಿ ಸಂಚರಿಸಬೇಕಾದ ಅಗತ್ಯವಿರುವ ರೋಗಿಗಳು, ಅವರ ಪರಿಚಾರಕರು, ವ್ಯಕ್ತಿಗಳಿಗೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಉದ್ದೇಶಿಸಿರುವ ವ್ಯಕ್ತಿಗಳಿಗೆ ಕನಿಷ್ಠ ರುಜುವಾತನ್ನು ಹಾಜರುಪಡಿಸಿ ಸಂಚರಿಸಲು ಅನುಮತಿಸತಕ್ಕದ್ದು.

5. ಬೇಕರಿ, ಆಹಾರ, ದಿನಸಿ, ಹಣ್ಣು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತುಗಳು, ಮಾಂಸ ಮತ್ತು ಮೀನು, ಪಶು ಆಹಾರದ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಅನುಮತಿಸಿದೆ. ಸಾರ್ವಜನಿಕ ವಿತರಣೆಯ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿಸಿದೆ. ಜನರು ತಮ್ಮ ಮನೆಯ ಹೊರಗೆ ಓಡಾಡುವುದನ್ನು ಕಡಿಮೆ ಮಾಡುವುದಕ್ಕಾಗಿ 24×7 ಅವಧಿಯಲ್ಲಿ ಸಾಮಗ್ರಿಗಳನ್ನು ಮನೆಮನೆಗೆ ವಿತರಿಸಲು (Home Delivery) ಪ್ರೋತ್ಸಾಹ.

ಈ ಎಲ್ಲಾ ಕಾರ್ಯಾಚರಣೆಗಳು ಕೋವಿಡ್-19ರ ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಒಳಪಟ್ಟಿರತಕ್ಕದ್ದು.

6. ರೆಸ್ಟೋರೆಂಟ್ ಮತ್ತು ಹೋಟೆಲ್‍ಗಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಸತಕ್ಕದ್ದು.

7. ರೈಲುಗಳ ಸಂಚಾರಕ್ಕೆ ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿಸಿದೆ. ವಿಮಾನ, ರೈಲು ಮತ್ತು ರಸ್ತೆ ಮೂಲಕ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕಾಗಿ ವಿಮಾನ ನಿಲ್ದಾಣಗಳಿಗೆ, ರೈಲ್ವೆ ನಿಲ್ದಾಣಗಳಿಗೆ ಹೋಗಿ ಬರುವುದಕ್ಕೆ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ (ಕಂಪನಿಗಳು ನಿರ್ವಹಿಸುವ ಕ್ಯಾಬಗಳು ಸೇರಿದಂತೆ) ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಿಂಧುವಾದ ಪ್ರಯಾಣ ದಾಖಲೆ ಅಥವಾ ಟಿಕೇಟನ್ನು ಪ್ರದರ್ಶಿಸಿದ ನಂತರ ಮತ್ತು ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವ ಷರತ್ತಿಗೊಳಪಟ್ಟು ಮಾತ್ರವೇ ಅಂಹತ ಸಂಚಾರಕ್ಕೆ ಅನುಮತಿಸುವುದು.

8. ಕೋವಿಡ್-19 ಸಮುಚಿತ ವರ್ತನೆಗಳನ್ನು (CAB) ಹಾಗೂ ಅಸ್ತಿತ್ವದಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಹೊರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ.

ಈ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ.

ಈ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *