ರಾಜ್ಯ

ತಜ್ಞರ ಸಲಹೆ ಮೇರೆಗೆ ರಾಜ್ಯದ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು prajakiran.com, ಜ. 21: ಕೋವಿಡ್ 19 ಮತ್ತೆ ವೇಗವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ರಾಜ್ಯದ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಕುರಿತು ವಿವರ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ 12 ತಜ್ಞರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ‌

ರಾಜ್ಯದಲ್ಲಿ ಕರೋನಾ ಪ್ರಕರಣ ಸಾಕಷ್ಟು ಇದ್ದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೇವಲ ಶೇ. 5 ರಷ್ಟಿದೆ.

ಒಂದುವೇಳೆ ಅದು ಹೆಚ್ಚಾದರೆ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ. ಸದ್ಯಕ್ಕೆ ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದರು.

ಆದ್ದರಿಂದ ಜನರು ಕರೋನಾ ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಮನವಿ ಮಾಡಿದರು.

 ರಾತ್ರಿ ಕರ್ಪ್ಯೂ ಮತ್ತೆ ಯಥಾವತ್ತಾಗಿ ಮುಂದುವರೆಯಲಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಸಚಿವ ಅಶೋಕ ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *