ಅಂತಾರಾಷ್ಟ್ರೀಯ

ಪಶ್ಚಿಮಬಂಗಾಳದಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಲಾಠಿ ಚಾರ್ಜ್ : ಒಬ್ಬ ಸಾವು, ಇಬ್ಬರು ಗಂಭೀರ

ಕೋಲ್ಕತ್ತಾ prajakiran.com :
ಪಶ್ಚಿಮಬಂಗಾಳದಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆ ನಡೆದಿದೆ.


ಈ ವೇಳೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದು ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ.

ಅಲ್ಲಿಯ ಮಮತಾ ದೀದಿ
ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಉತ್ತರ್ ಕನ್ಯಾ ಸೆಕ್ರಟರಿಯೇಟ್ ನತ್ತ ನುಗ್ಗಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿತ್ತು.

ಆಗ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಲಾಠಿಚಾರ್ಜ್ ನಡೆಸಿದ್ದಾರೆ ಎಂದು ಅಲ್ಲಿನ ವರದಿಗಳು ತಿಳಿಸಿವೆ.

ಪೊಲೀಸರ ಲಾಠಿಚಾರ್ಜ್ ನಿಂದ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಉತ್ತರ ಪಶ್ಚಿಮ ಬಂಗಾಳದಲ್ಲಿ 12ಗಂಟೆ ಬಂದ್ ಗೆ ಕರೆ ನೀಡಿದ್ದು, ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *