ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ : ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

ಧಾರವಾಡ prajakiran.com : ಜಿಲ್ಲೆಯಲ್ಲಿ 2020 ಅಕ್ಟೋಬರ್ 28 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನವೆಂಬರ್ 5 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಆಯೋಜನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಶಾಂತಿಗೆ ಭಂಗ ಉಂಟಾಗದಂತೆ,ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಹಿತಕರ ಘಟನೆ  ನಿಯಂತ್ರಿಸುವ ದೃಷ್ಟಿಯಿಂದ  ಸಿ.ಆರ್.ಪಿ.ಸಿ 1973 ಕಲಂ 144 ಮತ್ತು ಕರ್ನಾಟಕ ರಾಜ್ಯ  ಪೊಲೀಸ್ ಕಾಯ್ದೆ 1963 ಕಲಂ 35   ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರ್ ಆರ್ ದಿಲೀಪ್ ಅವರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *