ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕೂ ಜಿಲ್ಲೆ ವ್ಯಾಪ್ತಿಯಲ್ಲಿ 74,268 ಮತದಾರರು

ಧಾರವಾಡ prajakiran.com : ಅ.೨೮ರಂದು ನಡೆಯಲಿರುವ ಪಶ್ಚಿಮ ಪದವೀಧರರ ಚುನಾವಣೆ ಸಂಪೂರ್ಣ ಕೊರೊನಾ ನಿಯಮಾವಳಿಗಳ ಪ್ರಕಾರವೇ ನಡೆಯಲಿದೆ.

ಈಗಾಗಲೇ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಚುನಾವಣಾಧಿಕಾರಿಗಳೂ ಆಗಿರುವ, ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.
ಅವರು ಮಂಗಳವಾರ ನಗರದಲ್ಲಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪಶ್ಚಿಮ ಪದವೀಧರರ ಕ್ಷೇತ್ರದ ನಾಲ್ಕೂ ಜಿಲ್ಲೆ ವ್ಯಾಪ್ತಿಯಲ್ಲಿ
ಒಟ್ಟು 74,268 ಮತದಾರರಿದ್ದಾರೆ. ಅದರಲ್ಲಿ 47584 ಪುರುಷ ಮತದಾರರಿದ್ದರೆ, 26173 ಮಹಿಳಾ ಮತದಾರರಿದ್ದಾರೆ. ಇತರೆ 511 ಜನ ಮತದಾರರಿದ್ದಾರೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಚುನಾವಣಾ ಸಿದ್ಧತೆ ಮಾಡಿಕೊಳ್ಳಲಾಗಿದೆ. 582 ಜನ ಸಿಬ್ಬಂದಿ, 362 ಜನ ಮೈಕ್ರೋ ಅಬಸರ್ವರ ಇದ್ದಾರೆ. 41 ಜನ ಸೆಕ್ಟರ್ ಆಫೀಸ್ ಇದ್ದಾರೆ.

ಕೊರೊನಾಕ್ಕೆ ಸಂಬಂಧಿಸಿದಂತೆ 42 ಜನ ವೈದ್ಯರನ್ನು ನೇಮಕ ಮಾಡಲಾಗಿದೆ ಎಂದರು.

71 ಕಡೆಗಳಲ್ಲಿ ವೀಡಿಯೋಗ್ರಾಫಿ ವ್ಯವಸ್ಥೆ ಹಾಗೂ 80 ಜನ ಆಶಾ ವರ್ಕರ್ ಗಳನ್ನು ನೇಮಕ ಮಾಡಲಾಗಿದ್ದು, ಪ್ರತಿ ಕೇಂದ್ರದಲ್ಲಿ ಹೆಲ್ತ್ ಡೆಸ್ಕ್ ಮಾಡಿ 381 ಜನರನ್ನು ಕೆಲಸಕ್ಕೆ ನೇಮಿಸಲಾಗಿದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *