ಕ್ರೀಡೆ

ವಿಂಬಲ್ಡನ್‌ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಗೆದ್ದ ರೋಹನ್‌ ಬೋಪಣ್ಣ, ಸಾನಿಯಾ ಮಿರ್ಜಾ ಜೋಡಿ

ನವದೆಹಲಿ prajakiran.com : ವಿಂಬಲ್ಡನ್‌ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ನಡೆದ ಸರ್ವ ಭಾರತೀಯರ ಪಂದ್ಯದಲ್ಲಿ ರೋಹನ್‌ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಜೋಡಿ ರಾಮಕುಮಾರ್‌ ರಾಮನಾಥನ್‌ ಮತ್ತು ಅಂಕಿತಾ ರೈನಾ ವಿರುದ್ಧ ಎರಡನೇ ಸುತ್ತಿಗೆ ಆಯ್ಕೆಯಾದರು.

ಗ್ರ್ಯಾನ್ ಸ್ಲಾಮ್‌ನ ಮಿಶ್ರ ಡಬಲ್ಸ್‌ ಪಂದ್ಯವೊಂದರಲ್ಲಿ ಇದೇ ಮೊದಲ ಬಾರಿಗೆ ಎರಡು ಭಾರತೀಯ ತಂಡಗಳು ಮುಖಾಮುಖಿಯಾಗಿವೆ. ಸಾನಿಯಾ ಹಾಗೂ ಬೋಪಣ್ಣ ಜೋಡಿ, 6-2, 7-6(5) ಸೆಟ್‌ಗಳಲ್ಲಿ ಸುಲಭವಾಗಿ ಜಯಗಳಿಸಿದೆ.

ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ಅಮೆರಿಕದ ಬೆಥನಿ ಮಟೆಕ್‌ ಸ್ಯಾಂಡ್ಸ್‌ ಜೋಡಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *