ರಾಜ್ಯ

ಗದಗದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸೋಂಕಿತ ಮಹಿಳೆ….!

ಗದಗ Prajakiran.com : ಕೊರೋನಾ ಸೋಂಕು ತಗುಲಿ, ಹೋಂ ಐಸೋಲೇಷನ್‌ನಲ್ಲಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ.

ಮೃತರು ಲಲಿತಾ ಶಂಕರಪ್ಪ ರೋಣದ (45) ಎಂದು ಗುರುತಿಸಲಾಗಿದೆ.

ಕಳೆದ‌ ವಾರ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.

ಇಂದು ಬೆಳಗಿನಜಾವ ಬಹಿರ್ದೆಸೆಗೆ ಎಂದು ತೆರಳಿದ್ದು, ಗ್ರಾಮದ ಹೊರವಲಯದ ಮರಕ್ಕೆ ನೇಣು ಬಿಗಿದುಕೊಂಡು‌ ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *