ರಾಜ್ಯ

ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕ ಸಾಧನೆ

ಬೆಂಗಳೂರು prajakiran.com : ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕನೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ.

ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ  ಮಹೇಶ ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಶ್ ಎನಿಸಿಕೊಂಡಿದ್ದಾನೆ

ಅವರ ತಾಯಿ ಮಲ್ಲವ್ವ  ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆಮಹೇಶ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ವಿದ್ಯಾಭ್ಯಾಸವನ್ನು ಇದುವರೆಗೆ ಮುಗಿಸಿದ್ದಾನೆ

ಈ ಹಿನ್ನಲೆಯಲ್ಲಿ ಮಂಗಳವಾರ ಅವನ ಮನೆಯೆಂದು ಕರೆಯಬಹುದಾದ ಪುಟ್ಟ ಗುಡಿಸಲಿಗೆ ಶಿಕ್ಷಣ ಸುರೇಶಕುಮಾರ ಭೇಟಿ ನೀಡಿ ಅಭಿನಂದಿಸಿದ್ದಾರೆ.

ಅವರು ಈ ಕುರಿತು ತಮ್ಮ ಮುಖಪುಟದಲ್ಲಿ ಬರೆದುಕೊಂಡಿದ್ದಾರೆ.

ಆ ಮನೆಯಲ್ಲಿ ಕುಳಿತುಕೊಳ್ಳಲು ಜಾಗವಿಲ್ಲ. ಮಹೇಶನಿಗೆ ಶಿಕ್ಷಣ ಇಲಾಖೆಯ ಪರವಾಗಿ ಅಭಿನಂದನೆ ಸಲ್ಲಿಸಿ ಕಾಲೇಜು ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಧೈರ್ಯ ತುಂಬಿ ಬಂದಿದ್ದೇನೆ. 

ಮಹೇಶನಿಗೆ ಪಿಯುಸಿ  ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ತೆಗೆದುಕೊಂಡು ಓದಬೇಕೆಂಬ ಮಹದಾಸೆಯಿದೆ. 

ಅವನ ಮನೆ, ಅವನ ಕುಟುಂಬ, ಅವರ ತಾಯಿಯ ಮುಗ್ಧತೆ, ಮಹೇಶನ ಸಾಧನೆ ಎಲ್ಲ ಕಂಡಾಗ ಕಣ್ತುಂಬಿ ಬಂತು  – ಅದೇ ರೀತಿ ಹೃದಯ ತುಂಬಿ ಬಂತು ಎಂದು ಆತನ ಸಾಧನೆ ಕುರಿತು ಹೇಳಿಕೊಂಡಿದ್ದಾರೆ.

ನಮ್ಮ ಹೆಮ್ಮೆಯ ಶಿಕ್ಷಣ ಸಚಿವರ ಮನದಾಳದ ಮಾತು ಐತಿಹಾಸಿಕ.ಇಂತಹ ಧೀಮಂತ ಸಚಿವರನ್ನು  ಪಡೆದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರು ಧನ್ಯರು  ಎಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಹಾಗೂ ಪ್ರಧಾನ  ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ಸಂತಸ ಹಂಚಿಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *