ನವದೆಹಲಿ prajakiran.com : ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯಶ್ಪಾಲ್ ಶರ್ಮಾ ಅವರು ಪತ್ನಿ ರೇಣು ಶರ್ಮಾ, ಮಕ್ಕಳಾದ ಪೂಜಾ, ಪ್ರೀತಿ ಹಾಗೂ ಚಿರಾಗ್ರನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 7:30ರ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಯಶ್ ಪಾಲ್ ಶರ್ಮಾ ಆಡಿದ್ದರು.
ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು. ಬಿಸಿಸಿಐ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.