ರಾಜ್ಯ

ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಯತ್ನಾಳ……!

ವಿಜಯಪುರ prajakiran.com : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಮ್ಮೆ ನೇರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ತಮ್ಮ ಅಸಮಾಧಾನ ವನ್ನು ಹೊರ ಹಾಕಿದ್ದಾರೆ.
ಅದರಲ್ಲೂ ವಿಶೇಷವಾಗಿ ತಮಗೆ ಕಲ್ಪಿಸಿರುವ ವೈಯಕ್ತಿಕ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿರುವ ಕುರಿತು ಪತ್ರ ಬರೆದಿದ್ದು, ಅದರಲ್ಲಿ ವಿವರವಾಗಿ ಗುಡುಗಿದ್ದಾರೆ.

ಪತ್ರದ ವಿವರ ಯಥಾವತ್ತಾಗಿ ಈ ರೀತಿಯಲ್ಲಿ ಇದೆ.

ನಾನು ಪ್ರಖರ ಹಿಂದುಪರವಾದ ಮತ್ತು ಜನಪರ ಹೋರಾಟ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವದರಿಂದ ಹಿಂದೆ ನನ್ನ ಮೇಲೆ ಅನೇಕ ಬಾರಿ ಕೆಲವು ಹಿಂದು ವಿರೋಧಿ ಸಂಘಟನೆಗಳು ಮತ್ತು ಮತಾಂಧ ಶಕ್ತಿಗಳು ದಾಳಿ ಮಾಡುವ ದುರುದ್ದೇಶದ ಮುನ್ಸೂಚನೆಯನ್ನು ಅರಿತ ಸರ್ಕಾರದ ಪೋಲಿಸ್ ಗುಪ್ತಚರ ಇಲಾಖೆಯ ಆದೇಶದ ಮೇರೆಗೆ ನನಗೆ ಸೂಕ್ತ ಪೋಲಿಸ್ ಭದ್ರತೆಯನ್ನು ಒದಗಿಸಲಾಗಿತ್ತು .

ಆದರೆ ನಾನು ಮುಖ್ಯಮಂತ್ರಿಯವರ ವಿರುದ್ದ ಹೇಳಿಕೆ ನೀಡಿರುವೆನು ಎಂಬ ಕಾರಣಕ್ಕೆ ಇಂದು ಮುಖ್ಯಮಂತ್ರಿಗಳಾದ ತಾವು ತಮ್ಮ ಎಂದಿನಂತೆ ಸೇಡಿನ ರಾಜಕಾರಣ ಮಾಡಿ ಪೋಲಿಸ್ ಭದ್ರತೆಯನ್ನು ಹಿಂಪಡೆದಿರುತ್ತೀರಿ .

ತಮ್ಮ ಹಳೇ ಚಾಳಿಯನ್ನು ಮುಂದುವರೆಸಿ ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದೀರಿ . ನನ್ನ ಹೋರಾಟದ ನಿಲುವಿನಿಂದ ಆಗಬಹುದಾದ ಅನಾಹುತಗಳನ್ನು ತಡೆಯಲು ಸರ್ಕಾರ ಈ ಮೊದಲೇ ನನಗೆ ಪೋಲಿಸ್ ರಕ್ಷಣೆಯನ್ನು ಒದಗಿಸಿತ್ತು .

ಆದರೆ ದಿಡೀರನೆ ನನಗೆ ಕೊಟ್ಟ ಪೋಲಿಸ್ ರಕ್ಷಣೆಯನ್ನು ಹಿಂಪಡೆದಿರುವ ಹಿಂದಿನ ದುರುದ್ದೇಶ ಗೊತ್ತು .

ಇದು ತಮ್ಮ ಹಳೇ ಚಾಳಿ ಮತ್ತು ವಿಕೃತ ಮನಸ್ಸನ್ನು ಬಿಂಭಿಸುತ್ತದೆ . ಇದರಿಂದ ಹಿಂದುಪರ , ಜನಪರ ಹಾಗೂ ಅನ್ಯಾಯದ ವಿರುದ್ದದ ನನ್ನ ಹೋರಾಟವನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ .

ಸರ್ಕಾರದ ರಕ್ಷಣೆಯನ್ನು ನಂಬಿ ನಾನು ಹೋರಾಟ ಮಾಡುತ್ತಿಲ್ಲ . ನನ್ನ ಹೋರಾಟ ನಿರಂತರವಾಗಿರುತ್ತದೆ .

ಮುಂದಿನ ದಿನಗಳಲ್ಲಿ ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದಲ್ಲಿ ಅದಕ್ಕೆ ಆಡಳಿತ ನಡೆ ತಾವು ಮತ್ತು ಸರ್ಕಾರ ಹೊಣೆಯಾಗುತ್ತೀರಿ .

ತಮ್ಮ ಕೀಳುಮಟ್ಟದ ಕಾರ್ಯವೈಖರಿ , ಸೇಡಿನ ರಾಜಕೀಯಕ್ಕೆ ನನ್ನ ಧಿಕ್ಕಾರವಿರಲಿ ಎಂದು ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಗುಡುಗಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *