ರಾಜ್ಯ

ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಸ್ತಾಂತರ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಯನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಸ್ತಾಂತರಗೊಂಡಿದೆ.

ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ಸಲ್ಲಿಸಿದ ಮನವಿಯನ್ನು ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ಸಿಬಿಐ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಇದಕ್ಕೆ ಸಿಬಿಐ ಅಧಿಕಾರಿಗಳು ತಕರಾರು ಸಲ್ಲಿಸದ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ ಗಂಗಾಧರ ಅವರು ಈ ಮಹತ್ವದ ಆದೇಶ ಹೊರಡಿಸಿದರು.

ಇದರಿಂದಾಗಿ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಸ್ತಾಂತರ ಗೊಂಡಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *