ಅಪರಾಧ

ಮದುವೆ ವಿಳಂಬ ಮಾಡಿದ್ದಕ್ಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ…!

ಹುಬ್ಬಳ್ಳಿ prajakiran.com : ಕುಟುಂಬಸ್ಥರು ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಮನನೊಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಹುಬ್ಬಳ್ಳಿಯ ದೇವಾಂಗಪೇಟೆ ನಿವಾಸಿ ಶರಣಪ್ಪ ಫಕ್ಕೀರಪ್ಪ ಹಡಪದ(೨೯) ಆತ್ಮಹತ್ಯೆ ಮಾಡಿಕೊಂಡ ಯುವಕ.

ಆತ್ಮಹತ್ಯೆ ಮಾಡಿಕೊಂಡ ಯುವಕನಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಮನೆಯವರೆಲ್ಲ ಲಾಕ್‌ಡೌನ್ ಮುಗಿದ ನಂತರ ಅದ್ಧೂರಿಯಾಗಿ ಮದುವೆ ಮಾಡಲು ನಿರ್ಧರಿಸಿದ್ದರು.  

ಇದರಿಂದ ಮನನೊಂದ ಶರಣಪ್ಪ ಮದುವೆ ಮಾಡಿ ಎಂದು ಕುಟುಂಬದ ಸದಸ್ಯರೊಂದಿಗೆ ಜಗಳ ಮಾಡಿಕೊಂಡು ಶನಿವಾರ ಸಂಜೆ ವೇಳೆ ಮನೆ ಬಿಟ್ಟು ಹೋಗಿದ್ದ.

ಸಂತೋಷನಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗ್ಗೆ ಕೆರೆಯಲ್ಲಿ ಸಂತೋಷನ ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಅಶೋಕ ನಗರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *