ಜಿಲ್ಲೆ

ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಆಗಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

ಧಾರವಾಡ prajakiran.com ಫೆ.07:

ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಸೋಮವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಹಿಂದಿನ ಸಿಇಓ ಡಾ.ಸುಶೀಲಾ ಬಿ. ಅವರು ಡಾ. ಇಟ್ನಾಳ ಅವರಿಗೆ ಅಧಿಕಾರ ವಹಿಸಿಕೊಟ್ಟರು.

ಡಾ.ಸುರೇಶ ಇಟ್ನಾಳ ಅವರು ಈ ಹಿಂದೆ ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಅಧಿಕಾರವಹಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ ಸೇರಿದಂತೆ ಜಿಲ್ಲಾ ಪಂಚಾಯತ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *